ನೆಲಮಂಗಲ: ಪತ್ನಿ ಹಾಗೂ ಮಗನಿಂದ ಪತಿ ಸಾವಿಗೀಡಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಜರುಗಿದೆ.
Advertisement
ಕುಡಿದು ಬಂದ ಎಂದು ತಾಯಿ ಹಾಗೂ ಮಗ ಸೇರಿ ಗಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿನ್ನೆಲೆ, ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಹಲ್ಲೆ ಬಳಿಕ ಗಾಯಾಳು ಪತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆ ಹಿನ್ನೆಲೆ, ಪತ್ನಿ ಗೀತ ಮತ್ತು ಮಗ ಹೇಮಂತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.