ಮುಡಾ ಹಗರಣದ ಜಟಾಪಟಿ ನಡುವೆ ಸಿಎಂ-ಗವರ್ನರ್ ಮುಖಾಮುಖಿ!

0
Spread the love

ಬೆಂಗಳೂರು: ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್​ಪಿ ಕಚೇರಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ. ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಇತ್ತೀಚೆಗೆ ಅನುಮತಿ ನೀಡಿದ್ದರು.

Advertisement

ಇದರ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು. ಹೀಗಾಗಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ತೆರಳಿದ್ದ ಸಿದ್ದರಾಮಯ್ಯ ಈ ವೇಳೆ ಭೇಟಿ ಮಾಡಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಇತ್ತೀಚೆಗೆ ಅನುಮತಿ ನೀಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚನಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​ ನಾಯಕರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದರು.


Spread the love

LEAVE A REPLY

Please enter your comment!
Please enter your name here