ಉಡುಪಿ: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಾಜಿ ಮೀನುಗಾರಿಕಾ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಗಂಟಲಿನ ಸೋಂಕು, ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪ್ರಮೋದ್ ಮಧ್ವರಾಜ್ ಅವರು ಕಳೆದ ರಾತ್ರಿ ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಒಂದು ತಿಂಗಳಿಂದ ನಿರಂತರವಾಗಿ ಪ್ರವಾಸ ಮತ್ತು ಹಲವಾರು ಕಾರ್ಯಕ್ರಮಗಳಿಗೆ ಭಾಗಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಅನಾರೋಗ್ಯ ಬಾಧಿಸಿರಬಹುದು ಎನ್ನಲಾಗಿದೆ. ಸದ್ಯ ಜ್ವರ ಕಡಿಮೆಯಾಗಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಲಿದ್ದಾರೆ ಎಂದು ಆಪ್ತ ಮೂಲಗಳಿಂದ ಮಾಹಿತಿ ದೊರಕಿದೆ.



