ಅಭಿಯಾನದ ಯಶಸ್ಸಿಗೆ ಸಹಕರಿಸಿ : ಭರತ್ ಎಸ್

0
Leprosy case detection campaign from November 4 to 21
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಜಿಲ್ಲಾದ್ಯಂತ ನವೆಂಬರ್ 4ರಿಂದ 21ರವರೆಗೆ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ ( ಎಲ್‌ಸಿಡಿಸಿ) ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನದ ಯಶಸ್ಸಿಗೆ ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ತಿಳಿಸಿದರು.

Advertisement

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ 2024-25ನೇ ಸಾಲಿನಲ್ಲಿ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನ (ಎಲ್‌ಸಿಡಿಸಿ) ಹಮ್ಮಿಕೊಳ್ಳುವ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್‌ಸಿಡಿಸಿ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರ ಭಾಗವಹಿಸುವಿಕೆ ಮುಖ್ಯವಾಗಿದೆ. ಪ್ರತಿ ಗ್ರಾಮ ಪಂಚಾಯತ್‌ನಿಂದ ಸದರಿ ಅಭಿಯಾನದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಗ್ರಾಮ ಪಂಚಾಯತ್‌ನಿಂದ ಕಸದ ವಿಲೇವಾರಿ ವಾಹನದ ಮುಖಾಂತರ ಅಭಿಯಾನದ ಕುರಿತು ಮೈಕಿಂಗ್ ಮಾಡಿಸುವುದು, ಧಾರ್ಮಿಕ ಕ್ಷೇತ್ರಗಳಲ್ಲಿ ಹಾಗೂ ಪ್ರತಿನಿತ್ಯ ಗ್ರಾಮ ಮಟ್ಟದಲ್ಲಿ ಡಂಗುರ ಸಾರುವುದು.

ಒಟ್ಟಾರೆಯಾಗಿ ಅಭಿಯಾನ ವ್ಯವಸ್ಥಿತವಾಗಿ ಜರುಗಿಸಬೇಕೆಂದು ಭರತ್ ಎಸ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ಕುಷ್ಟ ರೋಗ ವಿಭಾಗ)ದ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೀನಾಕ್ಷಿ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜೇಂದ್ರ ಬಸರಿಗಿಡದ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ವೈ.ಕೆ. ಭಜಂತ್ರಿ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಅಧಿಕಾರಿ ಡಾ. ಅರುಂಧತಿ ಕುಲಕರ್ಣಿ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ರೂಪಸೇನ ಚವ್ಹಾಣ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ ಅವರು ಮಾತನಾಡಿ, ಎಲ್‌ಸಿಡಿಸಿ ಸಮೀಕ್ಷಾ ಕಾರ್ಯಕ್ರಮವನ್ನು ನವೆಂಬರ್ 4ರಿಂದ 21ರವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಹಮ್ಮಿಕೊಳ್ಳಲಾಗುತ್ತಿದ್ದು, ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ 10 ಸಮೀಕ್ಷಾ ತಂಡಗಳಿಗೆ ಓರ್ವ ಮೇಲ್ವಿಚಾರಕರನ್ನು ನಿಯಮಿಸಲಾಗುವುದು. ಜಿಲ್ಲೆಯಲ್ಲಿ 813 ಸಮೀಕ್ಷಾ ತಂಡಗಳ ಕ್ರಿಯಾ ಯೋಜನೆ ರಚಿಸಲಾಗಿದೆ. ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳನ್ನು ಹಾಗೂ ನಗರ ಪ್ರದೇಶಗಳಲ್ಲಿ ಎಲ್‌ಸಿಡಿಸಿ ಸಮೀಕ್ಷಾ ಕಾರ್ಯದಲ್ಲಿ ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಭೆಗೆ ವಿವರಿಸಿದರು.


Spread the love

LEAVE A REPLY

Please enter your comment!
Please enter your name here