ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು: ಸಿಎಂ ಸಿದ್ದರಾಮಯ್ಯ ಕಿಡಿ

0
Spread the love

ಮೈಸೂರು: ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾಹೀರಾತನ್ನು ಇವತ್ತಿಗೆ ನೀವು ಹೇಗೆ ವ್ಯಾಖ್ಯಾನ ಮಾಡ್ತೀರಾ ಹಾಗೆ. ಜಾಹೀರಾತಿನ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ವಿಚಾರವಾಗಿ,

Advertisement

ಮಾಜಿ ಸಿಎಂ ಯಡಿಯೂರಪ್ಪ ಪೋಕ್ಸೋ ಕೇಸ್​ನಲ್ಲಿ ಸಿಕ್ಕಿಬಿದ್ದಿದ್ದಾರೆ. ಮೊದಲು ಪಾರ್ಲಿಮೆಂಟ್ ಬೋರ್ಡ್​ನಿಂದ ಕಿತ್ತು ಹಾಕಲು ಹೇಳಿ. ಕೋರ್ಟ್ ಇಲ್ಲದಿದ್ದರೆ ಯಡಿಯೂರಪ್ಪ ಜೈಲಿನಲ್ಲಿ ಇರಬೇಕಿತ್ತು ಎಂದು ಕಿಡಿಕಾರಿದ್ದಾರೆ.

ಇನ್ನು ಸಚಿವ ಸಂಪುಟ ಸಭೆಯಲ್ಲಿ ಬರೋಬ್ಬರಿ 43 ಕೇಸ್​ಗಳನ್ನ ರಾಜ್ಯ ಸರ್ಕಾರ ವಾಪಸ್ ಪಡೆದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರಕ್ಕೆ ಕೆಲವು ಕೇಸ್​ಗಳನ್ನು ಹಿಂಪಡೆಯುವ ಅಧಿಕಾರ ಇದೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here