ಆನೇಕಲ್:– ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸರು ಕಾರ್ಯಚರಣೆ ನಡೆಸಿ ಕುಖ್ಯಾತ ಮನೆಗಳ್ಳನನ್ನು ಬಂಧಿಸಿದ್ದಾರೆ.
Advertisement
ಬೆಂಗಳೂರಿನ ರಘುವನಹಳ್ಳಿಯ ನಿವಾಸಿ ರಘು ಅಲಿಯಾಸ್ ಪೆಪ್ಸಿ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಈ ಖತರ್ನಾಕ್ ಕಳ್ಳ, ಮನೆಗಳ್ಳತನವನ್ನೇ ಕಾಯಕವನ್ನಾಗಿಸಿಕೊಂಡಿದ್ದ. ಅದರಂತೆ ಬರೋಬ್ಬರಿ 21ಮನೆ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಅಲ್ಲದೇ ಹಲವು ಪೊಲೀಸ್ ಠಾಣೆಗಳಿಗೆ ಈ ಕಳ್ಳ ಬೇಕಾಗಿದ್ದ. ಖಚಿತ ಮಾಹಿತಿ ಮೇರೆಗೆ ಆರೋಪಿ ರಘು ನನ್ನು ಬಂಧಿಸಲಾಗಿದೆ.
ಆನೇಕಲ್ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.