ಹುಬ್ಬಳ್ಳಿ:- ಯುವಕನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
Advertisement
ಆರೋಪಿಗಳನ್ನು ಸುದೀಪ್, ಕಿರಣ್ ಎಂದು ಗುರುತಿಸಲಾಗಿದೆ. ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಕೂಡಲೇ ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಿಮ್ಸ್ ಆಸ್ಪತ್ರೆಗೆ ಕಮಿಷನರ್ ಎನ್. ಶಶಿಕುಮಾರ್ ಭೇಟಿ ನೀಡಿ, ಹತ್ಯೆಗೆ ಕಾರಣ ಏನು ಎಂಬ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ.