ಬೆಂಗಳೂರು:- ಕೇಂದ್ರ ಸರ್ಕಾರದಿಂದ ರಾಜ್ಯಪಾಲ ಗೆಹ್ಲೋಟ್ಗೆ ಈಗ Z ಶ್ರೇಣಿಯ ಭದ್ರತೆ ಒದಗಿಸಲಾಗಿದೆ.
Advertisement
ಕರ್ನಾಟಕ ಸೇರಿ ದೇಶದಾದ್ಯಂತ ಸದ್ದು ಮಾಡಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ರಾಜ್ಯಪಾಲರು ಅನುಮತಿ ನೀಡಿದ್ದರು. ಪ್ರಾಸಿಕ್ಯೂಷನ್ ಅನುಮತಿ ಬಳಿಕ ರಾಜ್ಯಪಾರು ಬುಲೆಟ್ ಪ್ರೂಫ್ ಕಾರು ಪಡೆದಿದ್ದರು. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರಾಜ್ಯಪಾಲರು ಅಧಿಕಾರ ಸ್ವೀಕರಿಸಿದಾಗಲೇ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು. ಆದರೆ ಆ ಕಾರನ್ನು ವಾಪಸ್ ಕಳುಹಿಸಿದ್ದರು. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಬಳಿಕ ರಾಜ್ಯದಲ್ಲಿ ಕೆಲವು ಕಡೆ ಪ್ರತಿಭಟನೆಗಳು ನಡೆದಿತ್ತು. ಈ ಪ್ರತಿಭಟನೆಯ ನಂತರ ಬುಲೆಟ್ ಪ್ರೂಫ್ ಕಾರಿನ ವ್ಯವಸ್ಥೆ ಮಾಡಲಾಗಿತ್ತು.