ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ.
ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದ್ದರೆ ನ.23 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ದೇಶದಲ್ಲಿ ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನ.13 ರಂದು ಉಪಚುನಾವಣೆ ನಡೆಯಲಿದೆ. ಉತ್ತರಾಖಂಡದ ಒಂದು ವಿಧಾನಸಭಾ ಕ್ಷೇತ್ರ ಮತ್ತು ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರ ಉಪಚುನಾವಣೆ ನ.20 ರಂದು ನಡೆಯಲಿದೆ. ಒಟ್ಟು 48 ವಿಧಾನಸಭೆ ಮತ್ತು 2 ಲೋಕಸಭಾ ಉಪಚುನಾವಣೆಯ ಫಲಿತಾಂಶ ನ.23 ರಂದು ಪ್ರಕಟವಾಗಲಿದೆ.



