ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 94 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ವರನ್ನು ಜುಲೈ 12 ರಂದು ಜಾರಿ ನಿರ್ದೇಶಾನಾಲಯ (ಇಡಿ) ಬಂಧನ ಮಾಡಿದ್ದರು.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿತ್ತು. ಈ ಹಿನ್ನೆಲೆ ಶಾಸಕ ನಾಗೇಂದ್ರ ಅವರು ಇಂದು ರಿಲೀಸ್ ಆಗಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರು ಸಂಭ್ರಮಿಸಿದರು. ನಾಯಕನನ್ನು ಮೇಲೆತ್ತಿ ಕುಣಿದರು. ಹೂವಿನ ಹಾರ ಹಾಕಿ, ಬೂದಗುಂಬಳ ಹೊಡೆದು ಸಂಭ್ರಮಾಚರಿಸಿದರು.



