MUDA Scam ಮತ್ತೊಂದು ತಲೆದಂಡ: ದಿಢೀರ್ ರಾಜೀನಾಮೆ ಕೊಟ್ಟ ಮುಡಾ ಅಧ್ಯಕ್ಷ ಮರಿಗೌಡ

0
Spread the love

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

Advertisement

ಮರೀಗೌಡ ಅವರು ಬುಧವಾರ ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್‌ಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ‌ ಭೇಟಿ ಮಾಡಿದ್ದರು.

ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಬಳಿಕ ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

 


Spread the love

LEAVE A REPLY

Please enter your comment!
Please enter your name here