ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಳ್ಳಿ : ಪ್ರೊ. ಬಿ.ಕೆ. ತುಳಸಿಮಾಲ

0
Rural Women's Day celebration at Akkamahadevi Women's University
Spread the love

ವಿಜಯಸಾಕ್ಷಿ ಸುದ್ದಿ, ವಿಜಯಪುರ : ಆಹಾರ ಸರಪಳಿಯಲ್ಲಿ ಮತ್ತು ಆಹಾರ ಭದ್ರತೆಯನ್ನು ಒದಗಿಸುವಲ್ಲಿ ಮಹಿಳೆಯರ ಕೊಡುಗೆ ಗಣನೀಯವಾಗಿದೆ. ಕೃಷಿ ಕೈಂಕರ್ಯ ಮಹಿಳಾ ಪ್ರಧಾನವಾಗಿದೆ. ಆದರೆ ಕೃಷಿಯ ಮೇಲಿನ ಅಧಿಕಾರ ಮಾತ್ರ ಪುರುಷರ ಪ್ರಾಬಲ್ಯದಲ್ಲಿದೆ. ಇದನ್ನು ಮೀರಿ ಮಹಿಳೆಯರು ಕೃಷಿ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ಬಿ.ಕೆ. ತುಳಸಿಮಾಲ ಅಭಿಪ್ರಾಯಪಟ್ಟರು.

Advertisement

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಗ್ರಾಮೀಣ ಮಹಿಳೆಯರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮಹಿಳೆಯರು ಉದ್ಯಮಶೀಲತೆ ಬೆಳೆಸಿಕೊಳ್ಳಲು ಮತ್ತು ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ವಿಶ್ವವಿದ್ಯಾಲಯಗಳು ಆದ್ಯತೆ ನೀಡಬೇಕು. ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ಪ್ರತಿಯೊಂದು ಕೃಷಿ ಸಂಬಂಧಿತ ಚಟುವಟಿಕೆಯ ಹಿಂದೆ ಮಹಿಳೆಯ ಕೊಡುಗೆ ಅಪಾರವಾಗಿದೆ. ಆದ್ದರಿಂದ, ವಿಶ್ವಸಂಸ್ಥೆ ಗ್ರಾಮೀಣ ಮಹಿಳೆಯರ ದಿನಾಚರಣೆಯ ಅಂಗವಾಗಿ ಗ್ರಾಮೀಣ ಮಹಿಳೆಯರು ಎಲ್ಲರಿಗಾಗಿ ಉತ್ತಮ ಆಹಾರವನ್ನು ಬೆಳೆಯುತ್ತಿದ್ದಾರೆ ಎಂಬುದನ್ನು ಈ ವರ್ಷದ ಧ್ಯೇಯ ವಾಕ್ಯವನ್ನಾಗಿಸಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಶಂಕರ ಕೋಳಿ ಮಾತನಾಡಿ, ಸರ್ಕಾರ ಕಾರ್ಮಿಕರಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಮಹಿಳಾ ಸಾಧಕಿಯರಾದ ಸುನಂದಾ ಪಾಟೀಲ, ಸುಮನ ಕೋಲ್ಹಾರ, ಮಂಗಲಾ ಗುಡಿಮಠ, ಚಂದ್ರವ್ವ ಬಬಲೇಶ್ವರ, ಯಲ್ಲವ್ವಾ ಸಾಲಗಲ್ಲ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್.ಎಂ. ಚಂದ್ರಶೇಖರ, ಪ್ರೊ. ಜಿ.ಬಿ. ಸೋನಾರ, ಡಾ. ಸೋನ ಕಾಂಬಳೆ, ಡಾ. ಕಲಾವತಿ ಕಾಂಬಳೆ ಉಪಸ್ಥಿತರಿದ್ದರು.

ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮೀದೇವಿ ವಾಯ್ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಡಾ. ಸರೋಜಾ ಸಂತಿ ಅತಿಥಿಗಳನ್ನು ಮತ್ತು ಸಾಧಕಿಯರನ್ನು ಪರಿಚಯಿಸಿದರು. ಡಾ. ರಜಿಯಾಬೇಗಂ ನದಾಫ್ ನಿರೂಪಿಸಿದರು. ರುಕ್ಮವ್ವಾ ಅಗಸರ ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಗ್ರಾಮೀಣ ಪ್ರದೇಶ ಮಹಿಳೆಯರ ಹತ್ತಿರ ನೇರವಾಗಿ ಕೃಷಿ ಮತ್ತು ಕೃಷಿಯೇತರ ಉತ್ಪನ್ನಗಳನ್ನು ಖರೀದಿಸುವ ಮೂಲಕ ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ ಪ್ರೋತ್ಸಾಹಿಸಬೇಕು ಎಂದರು.

 


Spread the love

LEAVE A REPLY

Please enter your comment!
Please enter your name here