ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಜೊತೆಗೆ ಜೈಲು ಸೇರಿದ್ದ ಎ13 ಆರೋಪಿ ದೀಪಕ್ ಕುಮಾರ್ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಕಳೆದ ಸೋಮವಾರ ಕೋರ್ಟ್‌ನಲ್ಲಿ ದೀಪಕ್ ಕುಮಾರ್‌ಗೆ ಜಾಮೀನು ಮಂಜೂರಾಗಿತ್ತು.
ಕೋರ್ಟ್ ನೀಡಿರುವ ಷರತ್ತುಗಳನ್ನು ಪೂರೈಸಿ ಜೈಲಿಗೆ ಬೇಲ್ ಕಾಪಿ ತಲುಪಿತ್ತು. ಬುಧವಾರ ರಾತ್ರಿ ಬೇಲ್ ಕಾಪಿ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ಕೈಸೇರಿತ್ತು. ಈ ಹಿನ್ನೆಲೆ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ದೀಪಕ್ ಕುಮಾರ್ ಬಿಡುಗಡೆಯಾಗಿದ್ದಾನೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಮತ್ತು ಮೊದಲನೇ ಆರೋಪಿಯಾಗಿರುವ ದರ್ಶನ್ ಗೆಳತಿ ಪವಿತ್ರಾ ಗೌಡ, ದರ್ಶನ್ ಮ್ಯಾನೇಜರ್ ಆಗಿದ್ದ 11ನೇ ಆರೋಪಿ ಆರ್ ನಾಗರಾಜು ಹಾಗೂ 12ನೇ ಆರೋಪಿ ಎಂ ಲಕ್ಷ್ಮಣ್ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.