ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ಕೇಂದ್ರ ಕಛೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಎಂ. ಭಾ.ಆ.ಸೇ, ವವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪಿ.ಆರ್. ಕಿರಣಗಿ, ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣವು ಇಡೀ ಜಗತ್ತಿಗೆ ಆದರ್ಶ ಹಾಗೂ ಸಾಂಸ್ಕೃತಿಕ ಮೌಲ್ಯವನ್ನು ತಿಳಿಸುವ ಶ್ರೇಷ್ಠ ಮಹಾಕಾವ್ಯವಾಗಿದೆ. ಸಾಮಾನ್ಯ ಬೇಟೆಗಾರನಾಗಿದ್ದ ರತ್ನಾಕರನು ಮಹರ್ಷಿ ವಾಲ್ಮೀಕಿಯಾದ ಬಗೆಯನ್ನು ಸವಿಸ್ತಾರವಾಗಿ ತಿಳಿಸಿ, ಮಹಾಪುರುಷರ ಜಯಂತಿ ಆಚರಣೆಯ ಮೂಲಕ ಅವರ ಆದರ್ಶ, ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಇಲಾಖಾ ಮುಖ್ಯಸ್ಥರಾದ ಪಿ.ವೈ. ನಾಯಕ, ವಿಜಯಶ್ರೀ ನರಗುಂದ, ಗಣೇಶ.ಎಲ್ ರಾಠೋಡ, ಬಸವರಾಜ ಅಮ್ಮನವರ, ಮಾಲತಿ ಎಸ್.ಎಸ್, ಶ್ರೀನಾಥ ಜಿ ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸುನೀಲ ಪತ್ರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.