ನವದೆಹಲಿ:- ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಭವಾನಿ ನಿರಾಳರಾಗುವಂತೆ ಮಾಡಿದೆ.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು.
ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಹೇಳಿದೆ.
ಸುಪ್ರೀಂ ತೀರ್ಪಿನಿಂದ ಭವಾನಿ ರೇವಣ್ಣ ರಿಲ್ಯಾಕ್ಸ್ ಆಗಿದ್ದಾರೆ.