ಅನಾರೋಗ್ಯ: ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಎಸ್​ಎಮ್​ ಕೃಷ್ಣ!

0
Spread the love

ಬೆಂಗಳೂರು:- ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಿಎಂ ಎಸ್​ಎಮ್​ ಕೃಷ್ಣ ಅವರು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇನ್ನೂ SM ಕೃಷ್ಣ ಅವರು, ಆಸ್ಪತ್ರೆಗೆ ದಾಖಲಾದ ಹಿನ್ನೆಲೆ, ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.


Spread the love

LEAVE A REPLY

Please enter your comment!
Please enter your name here