ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

0
Spread the love

ಬೆಂಗಳೂರು:  ಸೈಬರ್‌ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಅತ್ಯಾಚಾರ & ಲೈಂಗಿಕ ದೌರ್ಜನ್ಯ ಸಂಬಂಧದ ಎರಡು ಪ್ರತ್ಯೇಕ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಪ್ರಜ್ವಲ್‌ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು.

Advertisement

ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಮೂರು ಅರ್ಜಿಗಳನ್ನು ವಜಾಗೊಳಿಸಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.


Spread the love

LEAVE A REPLY

Please enter your comment!
Please enter your name here