ಹುಬ್ಬಳ್ಳಿ: ಚನ್ನಪಟ್ಟಣ ಉಪಕದನ ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಎಂಎಲ್ಸಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.
ಇಂದು ಹುಬ್ಬಳ್ಳಿಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿದಂತ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಈ ಮೂಲಕ ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದಂತ ಅವರು, ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆಯನ್ನು ಅಧಿಕೃತವಾಗಿ ನೀಡಿದ್ದಾರೆ. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಈಗ ನಾನು ಚನ್ನಪಟ್ಟಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.