ಚನ್ನಪಟ್ಟಣ ಟಿಕೆಟ್ ಫೈಟ್: ಜೆಡಿಎಸ್ ನಾಯಕರ ಸಲಹೆ ಮುಖ್ಯ ಎಂದ ಆರ್ ಅಶೋಕ್!

0
Spread the love

ಬೆಂಗಳೂರು:- ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಫೈಟ್ ಜೋರಾಗಿದ್ದು, ಇದೇ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು,ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಲಿದ್ದಾರೆ. ಇದು ಜೆಡಿಎಸ್‌ನ ಕ್ಷೇತ್ರವೇ ಆಗಿದ್ದರಿಂದ ಅವರ ಸಲಹೆಯೇ ಪ್ರಮುಖ ಎಂದರು.

ಸಿ.ಪಿ.ಯೋಗೇಶ್ವರ್‌ ಅವರ ಮನವೊಲಿಸಲು ನಾನು ಕೂಡ ಯತ್ನಿಸಿದ್ದೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟ್‌ ಸಂಬಂಧ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಬೇಕೆಂದು ಹಿರಿಯ ನಾಯಕರಿಗೆ ಮನವಿ ಮಾಡಿದ್ದೇವೆ. ಈ ಹಿಂದೆ ಕ್ಷೇತ್ರದಲ್ಲಿ ಕುಮಾರಸ್ವಾಮಿ ಶಾಸಕರಾಗಿದ್ದರು. ಹೀಗಾಗಿ ಅವರ ತೀರ್ಮಾನ ಪ್ರಮುಖವಾಗಿರುತ್ತದೆ. ಯೋಗೇಶ್ವರ್‌ ಅವರು ದುಡುಕುತ್ತಾರೆ ಅಥವಾ ತಪ್ಪು ತೀರ್ಮಾನ ಕೈಗೊಳ್ಳುತ್ತಾರೆಂದು ನನಗೆ ಅನ್ನಿಸುತ್ತಿಲ್ಲ ಎಂದಿದ್ದಾರೆ.

ನಿಖಿಲ್‌ ಕುಮಾರಸ್ವಾಮಿಯವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್‌ಡಿಎ ಭಾಗ ಆಗಿರುವುದರಿಂದ ಜೆಡಿಎಸ್‌ನವರ ಸಲಹೆ ಪ್ರಮುಖವಾಗಿರುತ್ತದೆ. ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here