ಬೆಂಗಳೂರು:– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.
Advertisement
ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್, ತೀವ್ರವಾದ ಬೆನ್ನು ನೋಬಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ರವರ ಏಕಸದಸ್ಯ ಪೀಠಕ್ಕೆ ಮನವಿ ಮಾಡಿದರು.
ದರ್ಶನ್ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡರು.
ಈ ವೇಳೆ ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅ.28ಕ್ಕೆ ಮುಂದೂಡಿದರು.