ಸಾಲಭಾದೆ ತಾಳಲಾರದೇ ಆತ್ಮಹತ್ಯೆಗೆ ಯತ್ನ: ಗಂಡ ಸಾವು, ಪತ್ನಿ ಪಾರು!

0
Spread the love

ತುಮಕೂರು:- ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ಮನಕಲಕುವ ಘಟನೆ ಜರುಗಿದೆ. ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ನಲ್ಲಿ ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಪತಿ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

47 ವರ್ಷದ ಅನಿಲ್, 45 ವರ್ಷದ ಉಮಾ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ ಸೇವಿಸಿದ ಪರಿಣಾಮ ಅನಿಲ್ ಮೃತಪಟ್ಟಿದ್ದು, ಪತ್ನಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಅನಿಲ್ ಕಗ್ಗೆರೆ ಗ್ರಾಮದವರಾಗಿದ್ದು, ಹೌಸಿಂಗ್ ಬೋರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಜೊತೆ ವಾಸವಿದ್ದರು.

ಹಲವು ವರ್ಷಗಳಿಂದ ಕುಣಿಗಲ್ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇತ್ತೀಚಿಗೆ ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿ ಅನಿಲ್ ಸುಮಾರು 8-10 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು.

ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಮಾತ್ರೆ ಸೇವಿಸಿ ಪತಿ, ಪತ್ನಿ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಡ ಅನಿಲ್ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಪತ್ನಿ ಉಮಾಗೆ ಕುಣಿಗಲ್ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here