ಬೆಂಗಳೂರಲ್ಲಿ ಸತತ ಮಳೆ ಹಿನ್ನೆಲೆ: ಶಾಲೆಗಳಿಗೆ ನಾಳೆ ರಜೆ ಘೋಷಣೆ

0
Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಭಾರೀ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿವೆ. ಮಳೆ ಅಬ್ಬರದ ಹಿನ್ನೆಲೆ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ರಜೆ ಘೋಷಿಸಿದ್ದು,

Advertisement

ಅಂಗನವಾಡಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದ್ದು, ಪ್ರಾಥಮಿಕ, ಪ್ರೌಢಶಾಲಾ ಬಿಟ್ಟು ಉಳಿದ ತರಗತಿಗಳು ಎಂದಿನಂತೆ ನಡೆಯಲಿವೆ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಐಐಟಿ, ಎಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here