ಬಳ್ಳಾರಿ: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದ ದರ್ಶನ್ ಅವರಿಗೆ ಇತ್ತೀಚೆಗೆ ನಿರಾಸೆ ಆಯಿತು. ಈಗ ಅವರು ಬಳ್ಳಾರಿ ಜೈಲಿನಲ್ಲಿ ಆರೋಗ್ಯ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ.
Advertisement
ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ. ಅಭಿಮಾನಿಗಳು ಆ್ಯಂಬುಲೆನ್ಸ್ಗೆ ಅಡ್ಡ ಬರುವ ಸಾಧ್ಯತೆ ಇರುವುದರಿಂದ ಪೊಲೀಸ್ ಭದ್ರತೆ ನೀಡಲಾಗಿದೆ.