ಬೆಂಗಳೂರು: ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಈ ಮೂಲಕ ಕುಮಾರಸ್ವಾಮಿಗೆ ಟಾಂಗ್ ಕೊಟ್ಟಿದ್ದರು. ಆದ್ರೆ, ಇದೀಗ ಕೊನೆ ಕ್ಷಣದಲ್ಲಿ ಸಿಪಿ ಯೋಗೆಶ್ವರ್ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Advertisement
ಹೌದು ಬಿಜೆಪಿ ನಾಯಕರ ನಡೆಗೆ ಸಹಜವಾಗಿ ಸಮಾಧಾನಗೊಂಡಿದ್ದ ಸಿಪಿ ಯೋಗೇಶ್ವರ್ ಅವರು ಇತ್ತೀಚಿಗೆ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದೀಗ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ವಾಟ್ಸಪ್ ಮುಖಾಂತರ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.


