ಬೆಂಗಳೂರು: ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಹಲವಾರು ಅವಘಡಗಳು ಸಂಭವಿಸುತ್ತಿವೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಸಾವಿನ ಸಂಖ್ಯೆ ಆರಕ್ಕೇರಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಭುವನ್ ರೆಡ್ಡಿ ಬಂಧಿತ ವ್ಯಕ್ತಿ. ಅವಘಡ ಸಂಭವಿಸಿದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿತ್ತು. ಈತ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ. ಹೆಣ್ಣೂರು ಪೊಲೀಸರು ಸದ್ಯ ಆರೋಪಿಯನ್ನ ಬಂಧಿಸಿದ್ದಾರೆ. ಕಾಂಟ್ರಾಕ್ಟರ್ ಮುನಿಯಪ್ಪನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿಯಪ್ಪ 4ನೇ ಮಹಡಿವರೆಗೆ ಕಟ್ಟಡ ನಿರ್ಮಾಣ ಮಾಡಿದ್ದ.
ಹೀಗಾಗಿ ಪೊಲೀಸರು ಆತನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಿಎನ್‌ಎಸ್ (BNS), ಬಿಬಿಎಂಪಿ ಆರ್‌ಇಆರ್‌ಎ ಆ್ಯಕ್ಟ್ ಹಾಗೂ ರೇರಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ಇವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಿಎನ್ ಎಸ್ 105, 125(A) 125(B), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 RERA (u/s3) ಅಡ್ಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.