ವಿಧಾನ ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಗೆಲುವು

0
Spread the love

ಮಂಗಳೂರು: ವಿಧಾನ ಪರಿಷತ್ತಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು 1,697 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ 1,958 ಮತ ಗಳಿಸಿದ್ದಾರೆ. ತೀವ್ರ ಪೈಪೋಟಿ ನೀಡಿದ ಕಾಂಗ್ರೆಸ್​​ನ ರಾಜು ಪೂಜಾರಿ ಪರಾಭವಗೊಂಡಿದ್ದಾರೆ. ಎಸ್‌ಡಿಪಿಐನ ಅನ್ವರ್ ಸಾದತ್ 195 ಮತ, ಪಕ್ಷೇತರ ಅಭ್ಯರ್ಥಿ ದಿನಕರ ಉಳ್ಳಾಲ್ 9 ಮತ ಗಳಿಸಿದರು.

Advertisement

ಒಟ್ಟು 87 ಮತಗಳು ತಿರಸ್ಕೃತಗೊಂಡವು. ಚಲಾವಣೆಯಾದ ಒಟ್ಟು 5,907 ಮತಗಳ ಪೈಕಿ 5,819 ಸಿಂಧು ಮತಗಳಿದ್ದವು‌. ಕೊಡಿಯಾಲ್ ಬೈಲಿನ ಸೇಂಟ್ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಕಾರ್ಯ ನಡೆಯಿತು.

ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಚುನಾವಣೆ ನಡೆದಿತ್ತು.


Spread the love

LEAVE A REPLY

Please enter your comment!
Please enter your name here