ಬಾಗಲಕೋಟೆ: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಾಳಿ!

0
Spread the love

ಬಾಗಲಕೋಟೆ:- ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಮುಧೋಳ ತಾಲೂಕು ವ್ಯಾಪ್ತಿಯಲ್ಲಿ ಜರುಗಿದೆ.

Advertisement

ತಾಲೂಕಿನಲ್ಲಿ ಅವ್ಯಾಹತವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿತ್ತು. ಅಕ್ರಮ ಮರಳುಗಾರಿಕೆ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಎಚ್ಚೆತ್ತ ಕಂದಾಯ ಇಲಾಖೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ತಾಲೂಕಿನ‌ ವಿವಿಧ ಭಾಗಗಳಲ್ಲಿ ಸಂಗ್ರಹ ಮಾಡಿರುವ ಅಕ್ರಮ ಮರಳು ಅಡ್ಡೆಗಳ ಮೇಲೆ‌ ದಾಳಿ ನಡೆಸಿದ್ದಾರೆ.

ಒಂಟಗೋಡಿ ಗ್ರಾಮದ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ‌ ದಾಳಿ ನಡೆಸಿರುವ ಅಧಿಕಾರಿಗಳು ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here