ಬಳ್ಳಾರಿ: ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ನಿರೀಕ್ಷೆಯಂತೆ ಬಿಜೆಪಿಯ ಮಾಜಿ ಎಂಎಲ್ಸಿ ಸಿ.ಪಿ.ಯೋಗೇಶ್ವರ ಅವರು ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಸಂಸದ ಇ ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ ಅವರು ನವೆಂಬರ್ 13 ರಂದು ನಡೆಯುವ ಸಂಡೂರು ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.
ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ ಮಾಡಿದರು. ತಹಶೀಲ್ದಾರ್ ಕಚೇರಿಯಲ್ಲಿ ಈ ಅನ್ನಪೂರ್ಣ ನಾಮಪತ್ರ ಸಲ್ಲಿಸಿದರು, ಸಂಸದ ಈ ತುಕಾರಾಂ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ ಸಾಥ್ ನೀಡಿದರು. ರೋಡ್ ಶೋ ನಡೆಯುವಾಗಲೇ ಮಧ್ಯದಲ್ಲಿಯೇ ತಹಶೀಲ್ದಾರ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಒಂದು ಸೆಟ್ ನಾಮಪತ್ರ ಸಲ್ಲಿಸಿದ ಈ ಅನ್ನಪೂರ್ಣ ರ್ಯಾಲಿ ಬಳಿಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಲಾಯಿತು.