ರಾಯಚೂರು:- ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಜರುಗಿದೆ.
Advertisement
ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. 45 ವರ್ಷದ ಗಿರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನಲ್ಲಿದ್ದ ಇನ್ನೋರ್ವ ಗಾಯಾಳು ಶಿವರಾಜ್ ಸ್ಥಿತಿ ಗಂಭೀರವಾಗಿದ್ದು, ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಸ್ಥಳಕ್ಕೆ ಬಳಗಾನೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.