ಬೆಂಗಳೂರು: ಕರ್ನಾಟಕ ಉಪ ಕದನದ ಕುರುಕ್ಷೇತ್ರ ರಂಗೇರುತ್ತಿದೆ. ನಾಡಿನ ನಾಡಿಮಿಡಿತ ಏನು ಅನ್ನೋ ಚಿತ್ರಣ ಕಟ್ಟಿಕೊಡುವ ಈ 3 ವಿಧಾನಸಭಾ ಉಪ ಚುನಾವಣೆ ಪ್ರತಿಷ್ಠೆ, ಅಸ್ತಿತ್ವದ ಹೋರಾಟಕ್ಕೆ ಸಾಕ್ಷಿ ಆಗಲಿದೆ. ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಕಾಳಗ ಶುರುವಾಗಿದ್ದು, ನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರ ಜೊತೆಗೆ ಬಳಿಕ ನಿಖಿಲ್ ಕುಮಾರಸ್ವಾಮಿ ಭರ್ಜರಿ ರೋಡ್ ಶೋ ನಡೆಸಿದ್ದು, ಬಳಿಕ ಚನ್ನಪಟ್ಟಣದ ಎನ್ ಡಿಎ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಪತ್ರ ಸಲ್ಲಿಕೆ ವೇಳೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್. ಅಶೋಕ್, ಡಿ.ವಿ.ಸದಾನಂದ ಗೌಡ ಸೇರಿದಂತೆ ಹಲವು ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಿದ್ದರು.



