HomeGadag Newsದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 300 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಅಕ್ಟೋಬರ್ 31ರಂದು ಗುರುವಾರ ನರಕ ಚತುರ್ದಶಿ, ನವೆಂಬರ್ 1ರಂದು ಶುಕ್ರವಾರ ಕನ್ನಡ ರಾಜ್ಯೋತ್ಸವ, ನವೆಂಬರ್ 2ರಂದು ಶನಿವಾರ ಬಲಿಪಾಡ್ಯಮಿ ಹಾಗೂ ನವೆಂಬರ್ 3ರಂದು ರವಿವಾರ ಇರುವುದರಿಂದ ಬೆಂಗಳೂರು ಮತ್ತು ಇತರೇ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಬೆಂಗಳೂರಿನಿಂದ ರಾಜ್ಯ/ಅಂತರರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ. ಹಬ್ಬ ಮುಗಿದ ಮೇಲೆ ನವೆಂಬರ್ 3 ಹಾಗೂ ನವೆಂಬರ್ 4ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು.

ಸದರಿ ವಿಶೇಷ ಸಾರಿಗೆಗಳ ಸದುಪಯೋಗ ಪಡಿಸಿಕೊಳ್ಳುವದರೊಂದಿಗೆ, ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!