HomeKarnataka NewsSatish Sail: ಅಕ್ರಮ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ʼಗೆ 7 ವರ್ಷ...

Satish Sail: ಅಕ್ರಮ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ʼಗೆ 7 ವರ್ಷ ಜೈಲು!

For Dai;y Updates Join Our whatsapp Group

Spread the love

ಬೆಂಗಳೂರು: ಬೇಲೇಕೇರಿ ಅಕ್ರಮ ಅದಿರು ನಾಪತ್ತೆ ಪ್ರಕರಣದಲ್ಲಿ ಸತೀಶ್​ ಸೈಲ್​ರನ್ನು ದೋಷಿ ಆಗಿದ್ದು, ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು  ಸತೀಶ್​ ಸೈಲ್​​ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಮೊದಲ ಹಾಗೂ ಎರಡನೇ ಪ್ರಕರಣದಲ್ಲಿಯೂ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಬೇಲೇಕೇರಿ ಅದಿರು ನಾಪತ್ತೆಗೆ ಸಂಬಂಧಿಸಿದಂತೆ ದಾಖಲಾದ 6 ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿತ್ತು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ವಾದ, ಪ್ರತಿವಾದ ಆಲಿಸಿ ಅ.24ರಂದು ಅಂತಿಮ ಆದೇಶವನ್ನು ಹೊರಡಿಸಿದ್ದರು. ಈ ವೇಳೆ ಒಟ್ಟು 6 ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಆಗಿದ್ದ ಮಹೇಶ್ ಬಿಳೆಯಿ ಅಪರಾಧಿ ಎಂದು ಆದೇಶ ಹೊರಡಿಸಲಾಗಿತ್ತು. ಇದೀಗ ಶಿಕ್ಷೆ ವಿಧಿಸಲಾಗಿದೆ. ಮೊದಲ ಕೇಸಿನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ  ಅರಣ್ಯಾಧಿಕಾರಿ ಆಗಿದ್ದ ಮಹೇಶ್ ಬಿಳೆಯ ಅವರಿಗೆ ತಲಾ 7 ವರ್ಷ ಶಿಕ್ಷೆ ಹಾಗೂ ಎಲ್ಲಾ ಆರೋಪಿಗಳಿಗೂ ಸೇರಿ 9.60 ಕೋಟಿ ರೂ. ದಂಡ ವಿಧಿಸಿದೆ.

ಇನ್ನು ಬೆೇಲೇಕೇರಿ ಅದಿರು ನಾಪತ್ತೆಯ 2ನೇ ಪ್ರಕರಣದಲ್ಲಿಯೂ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ ಹಾಗೂ ಎಲ್ಲಾ ಆರೋಪಿಗಳಿಗೂ ಸೇರಿ 6 ಕೋಟಿ ರೂ. ಡಂಡವನ್ನು ವಿಧಿಸಲಾಗಿದೆ. ಇನ್ನು 3ನೇ ಪ್ರಕರಣದಲ್ಲಿಯೂ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲ ಆರೋಪಿಗಳಿಗೂ ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ಸೇರಿ 9.36 ಕೋಟಿ ರೂ. ದಂಡ ವಿಧಿಸಲಾಗಿದೆ. 4ನೇ ಪ್ರಕರಣದಲ್ಲಿಯೂ ಸತೀಶ್ ಸೈಲ್ ಸೇರಿ ಎಲ್ಲ ಆರೋಪಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಎಲ್ಲ ಆರೋಪಿಗಳಿಗೆ ಸೇರಿ 9.52 ಕೋಟಿ ರೂ. ದಂಡ ವಿಧಿಸಲಾಗಿದೆ. ಇನ್ನು ದಂಡ ಪಾವತಿ ಮಾಡಲಾಗದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲು ಆದೇಶ ಹೊರಡಿಸಲಾಗಿದೆ.

ಮುಂದುವರೆದು 5ನೇ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ 120(B) ಅಡಿ ತಲಾ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ, 9.25 ಕೋಟಿ ರೂ. ದಂಡ ವಿಧಿಸಲಾಗಿದೆ. 6ನೇ  ಪ್ರಕರಣದಲ್ಲಿಯೂ ಸತೀಶ್ ಸೈಲ್ ಸೇರಿದಂತೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಇದರಲ್ಲಿ 90 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ. ದಂಡ ಪಾವತಿಸದೇ ಇದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಸ್ತರಣೆ ಮಾಡಲಾಗುತ್ತದೆ. ಒಟ್ಟಾರೆಯಾಗಿ ಬೇಲೇಕೇರಿ ಅದಿರು ನಾಪತ್ತೆ ಮಾಡಿದ 6 ಪ್ರಕರಣದಲ್ಲಿ ಭಾಗಿಯಾದ ಎಲ್ಲ ಆರೋಪಿಗಳಿಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!