ಹಾಸನ:- ಹಾಸನಾಂಬೆ ದರ್ಶನಕ್ಕೆ ಜನಸಾಗರ ಹರಿದು ಬಂದಿದ್ದು, ಕಿಲೋಮೀಟರ್ ಗಟ್ಟಲೆ ಕ್ಯೂ ನಿಂತಿದೆ.
Advertisement
ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ.
ಇಂದು ವೀಕೆಂಡ್ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ತಡರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಬೆಳಗ್ಗೆ ದೇವಿ ದರ್ಶನ ಪಡೆದು ಪುನೀತರಾದರು. 1,000 ರೂ., 300 ರೂ. ಶುಲ್ಕವಿರುವ ವಿಶೇಷ ದರ್ಶನದ ಸಾಲುಗಳು ಕೂಡ ಭರ್ತಿಯಾಗಿವೆ.
ರಾಜ್ಯ, ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ.