HomeGadag Newsಶೇಂಗಾ ಖರೀದಿ ಪ್ರಕ್ರಿಯೆ ಪ್ರಾರಂಭಿಸಿ : ಗೋವಿಂದರೆಡ್ಡಿ

ಶೇಂಗಾ ಖರೀದಿ ಪ್ರಕ್ರಿಯೆ ಪ್ರಾರಂಭಿಸಿ : ಗೋವಿಂದರೆಡ್ಡಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : 2024-25ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಹುಟ್ಟುವಳಿಯಿಂದ ಶೇಂಗಾ ಖರೀದಿಸುವ ಕುರಿತು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದ ಆದೇಶದನುಸಾರ ರೈತರು ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಮತ್ತು ಖರೀದಿ ಅವಧಿಯನ್ನು 90 ದಿನಗಳವರೆಗೆ ನೊಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಬೇಕು. ಜಿಲ್ಲೆಯಲ್ಲಿ ತೆರೆಯಲಾಗುವ ಶೇಂಗಾ ಹುಟ್ಟುವಳಿ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್‌ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ಎಫ್‌ಎಕ್ಯೂ ಗ್ರೇಡಿಂಗ್ ತರಬೇತಿ ನೀಡಬೇಕು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 3 ಕ್ವಿಂಟಾಲ್ ಗರಿಷ್ಠ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಖರೀದಿಸಬೇಕು. ಬೆಂಬಲ ಬೆಲೆಯಲ್ಲಿ ಶೇಂಗಾ ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಧಾ ಆರ್.ಬಂಡಿ ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‌ಗೆ 6,783ರಂತೆ ದರ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದನ್ವಯ 24-10-2024ರನುಸಾರ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಕರ್ನಾಟಕ ಸಹಕಾರಿ ಎಣ್ಣಿ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ರೈತರು ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಜರುಗಿಸಲಾಗುವುದು ಎಂದರು.

ಜಿಲ್ಲೆಯ 10 ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಉಪನಿಬಂಧಕರು, ಕೆಓಎಫ್ ವ್ಯವಸ್ಥಾಪಕರು ಹಾಜರಿದ್ದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಯನ್ವಯ ಜಿಲ್ಲೆಯ 10 ಕಡೆಗಳಲ್ಲಿನ ಶೇಂಗಾ ಖರೀದಿ ಕೇಂದ್ರಗಳು: ಗದಗ: ಬಳಗಾನೂರು, ಹೊಂಬಳ, ಮುಳಗುಂದ :ಶಿರಹಟ್ಟಿ- ರಣತೂರ, ಶಿಗ್ಲಿ, ರೋಣ ಅಬ್ಬಿಗೇರಿ, ಸೂಡಿ:ನರಗುಂದ-ಕಣಕಿಕೊಪ್ಪ, ಮುಂಡರಗಿ-ಬರದೂರು, ಕಲಕೇರಿ.

LEAVE A REPLY

Please enter your comment!
Please enter your name here

E-Paper

E-paper

Must Read

spot_img