ಚನ್ನಪಟ್ಟಣ ನಗರಸಭೆಯ 7 ಬಿಜೆಪಿ ಸದಸ್ಯರ ಪೈಕಿ 6 ಮಂದಿ ಕಾಂಗ್ರೆಸ್ ಸೇರ್ಪಡೆ!

0
Spread the love

ರಾಮನಗರ: ಉಪ ಸಮರ ಉಪಾಂತ್ಯಕ್ಕೆ ಬರ್ತಿದೆ. ಚುನಾವಣೆ ಹತ್ತಿರವಾಗುತ್ತಿದ್ದು, ಕದನ ಕಣ ರಂಗೇರುತ್ತಿದೆ. ಮೂರು ಕ್ಷೇತ್ರಗಳಲ್ಲೂ ಮಳೆ ಬಿಸಿಲು ಎನ್ನದೆ ಪ್ರಚಾರದ ಅಖಾಡದಲ್ಲಿ ನಾಯಕರ ಬೆವರು ಹರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ  ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ.

Advertisement

ಚನ್ನಪಟ್ಟಣ ನಗರಸಭೆಗೆ ಬಿಜೆಪಿಯಿಂದ ಗೆದ್ದಿದ್ದ 7 ಸದಸ್ಯರ ಪೈಕಿ 6 ಮಂದಿ ಮಾಜಿ ಸಂಸದ ಡಿ.ಕೆ. ಸುರೇಶ್ ಸಮ್ಮುಖದಲ್ಲಿ ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಚನ್ನಪಟ್ಟಣ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 6 ಮಂದಿ ನಗರಸಭೆ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.

ನಗರಸಭಾ ಸದಸ್ಯರಾದ ಚಂದ್ರು, ಮಂಗಳಮ್ಮ, ಮನೋಹರ್, ಕಮಲ, ಜಯಮಾಲ, ಕಸ್ತೂರಿ ಕಾಂಗ್ರೆಸ್ ಸೇರಿದ್ದಾರೆ. 2021-22ರಲ್ಲಿ ಇವರು ನಗರಸಭೆಗೆ ಬಿಜೆಪಿಯಿಂದ ಆಯ್ಕೆ ಆಗಿದ್ದರು. ಒಟ್ಟು 31 ಸದಸ್ಯರ ಪೈಕಿ 07 ಮಂದಿ ಬಿಜೆಪಿಯಿಂದ ಗೆದ್ದಿದ್ದರು. 16 ಮಂದಿ ಜೆಡಿಎಸ್‌ನಿಂದ ಗೆದ್ದಿದ್ದರು.


Spread the love

LEAVE A REPLY

Please enter your comment!
Please enter your name here