ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದೇ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ!

0
Spread the love

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದೇ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ. ಆರೋಪಿ ದರ್ಶನ್ ಅವರ ಮಧ್ಯಂತರ ಜಾಮೀನು ಭವಿಷ್ಯ ಇಂದು ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ.

Advertisement

ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದಾರೆ. ಬೆನ್ನುಹುರಿ ನೋವಿಗೆ ಪರಿಹಾರ ಪಡೆಯಲು ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಂಡಬೇಕೆಂದು ಕೋರಿ ಸೆಷನ್ಸ್ ಕೋರ್ಟ್‌ ಮೊರೆ ಹೋಗಿದ್ದರು. ಆದರೆ ಅಲ್ಲಿ ಜಾಮೀನು ತಿರಸ್ಕೃತಗೊಂಡ ಪರಿಣಾಮ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲ ಸಿ.ವಿ ನಾಗೇಶ್, ದರ್ಶನ್ ನೋವು ಉಲ್ಲೇಖಿಸಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಅವಶ್ಯಕತೆ ಇದೆ. ಇಲ್ಲವಾದಲ್ಲಿ ದರ್ಶನ್ ಒಂದು ಕಾಲಿಗೆ ಆಗಿರುವ ಸಮಸ್ಯೆ ಎರಡೂ ಕಾಲಿಗೆ ಆಗಬಹುದು. ಹೀಗಾಗಿ 3 ತಿಂಗಳು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು.

ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಇಂದು ವಾದ-ಪ್ರತಿವಾದವನ್ನು ಆಲಿಸಿ ಇಂದು ಆದೇಶ ಪ್ರಕಟಿಸಲಿದ್ದಾರೆ.


Spread the love

LEAVE A REPLY

Please enter your comment!
Please enter your name here