ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ಗದಗ ಜಿಲ್ಲೆಯ ಗದಗ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ ಸಮಿತಿಗೆ (ಕೆ.ಡಿ.ಪಿ)
Advertisement
ಶಣ್ಮುಕಪ್ಪ ಬಡ್ನಿ, ಎಂ.ಸಿ. ಶೇಖ, ಪ್ರಕಾಶ ಬೊಮ್ಮನಹಳ್ಳಿ, ಮಾರ್ತಂಡ ಹಾದಿಮನಿ, ರೇಖಾ ತಿಮ್ಮರೆಡ್ಡಿ ಅವರುಗಳನ್ನು ಅಧಿಕಾರೇತರ ಸದಸ್ಯರನ್ನಾಗಿ ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿನಾಥ ನಾಮನಿರ್ದೇಶನಗೊಳಿಸಿ ಆದೇಶಿಸಿದ್ದಾರೆ.