ಬೆಂಗಳೂರು:- ಬ್ಲ್ಯಾಕ್‌ಮೇಲರ್ ಎಂದ CM ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಸಿದ್ದರಾಮಯ್ಯ ಅವರ ವಿರುದ್ಧ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿಜೆ ಅಬ್ರಾಹಾಂ, ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಕೆಲವು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. ಅವರು ನನ್ನನ್ನು ಬ್ಲ್ಯಾಕ್‌ಮೇಲರ್ ಎಂದು ಕರೆದಿದ್ದೀರಿ. ಹೀಗಾಗಿ ನಿಮ್ಮ ವಿರುದ್ಧ ಮಾನನಷ್ಟ ಮೊಕದಮ್ಮೆ ದಾಖಲಿಸಿದ್ದೇನೆ ಎಂದು ಹೇಳಿದ್ದಾರೆ.



