ವಿಜಯಪುರ:- ರೈತರನ್ನು ಟೆಂಟ್ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರೆಲ್ಲರೂ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ವಕ್ಫ್ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ನೀಡಿ ರೈತರ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾತನಾಡಿದ ಜೋಶಿ ಅವರು, ವಕ್ಫ್ ಬೋರ್ಡ್ನ ಅನ್ಲಿಮಿಟೆಡ್ ಅಧಿಕಾರ ತೆಗೆಯಲು ಕ್ರಮಕೈಗೊಳ್ಳಲಾಗುತ್ತಿದ್ದು, ಕಾನೂನು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಅಲ್ಲದೇ ರೈತರ ಕಾನೂನು ಹೋರಾಟಕ್ಕೆ ನೆರವು ನೀಡುವುದಾಗಿ ಭರವಸೆ ನೀಡಿದರು.
ಕಾನೂನು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ತೀರ್ಮಾನ ಮಾಡಿದ ನಂತರ ಪ್ರತಿ ಜಿಲ್ಲೆಯಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ವಕ್ಫ್ ಅದಾಲತ್ ಮಾಡಿ ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. 1974ರ ಗೆಜೆಟ್ ಆದೇಶ ಹೊರ ತೆಗೆಯಲು ಮುಂದಾಗಿದ್ದಾರೆ. ಪಹಣಿಯಲ್ಲಿ ವಕ್ಫ್ ಎಂದು ಸೇರಿಸಿದ್ದನ್ನು ಖಂಡಿಸಿ ರೈತರು ಹೋರಾಟ ಮಾಡುತ್ತಿದ್ದಾರೆ.
ಇದು ರೈತರ ಹೋರಾಟ, ಬಿಜೆಪಿ ಹೋರಾಟವಲ್ಲ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲವಿದೆ. ರೈತರನ್ನು ಟೆಂಟ್ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ. ಸುಪ್ರೀಂಕೋರ್ಟ್, ಹೈಕೋರ್ಟ್ಗೆ ಹೋದರೂ ಕಾನೂನು ನೆರವು ನೀಡುವುದಾಗಿ ರೈತರಿಗೆ ಧೈರ್ಯ ತುಂಬಿದರು.