ಬೆಂಗಳೂರು:- ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮಾನವಿಯೊಂದು ಬಂದಿದೆ.
ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಅವರು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ಏನಿದೆ!?
ಕನ್ನಡ ನಾಡಿಗೆ ಹೆಮ್ಮೆಯ ಕಳಶ ಪ್ರಯಾರಾಗಿರುವ ಶ್ರೀ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ನಾಮಾಂಕಿತ ವಾಗಿ ಐವತ್ತು ವಸಂತಗಳನ್ನು ಪೂರೈಸಿ ಸುವರ್ಣ ಸಂಭ್ರಮದಲ್ಲಿರುವ ಶುಭ ಸಂದರ್ಭದಲ್ಲಿ ಅವರಿಗೆ ರಾಜ್ಯದ ಅತ್ಯುನ್ನತ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ರಾಜ್ಯದ ಜನರ ಪರವಾಗಿ ಗೌರವಿಸುವಂತೆ ಕೋರುತ್ತೇವೆ.
ಜಿಲ್ಲೆಯನ್ನು ಪ್ರತಿನಿಧಿಯಾಗಿ ರಾಜ್ಯ ಹಾಗೂ ರಾಷ್ಟ್ರದ ಸರ್ಕಾರಗಳಲ್ಲಿ ಮಂತ್ರಿಯಾಗಿ , ನಾಡಿನ ಮುಖ್ಯಮಂತ್ರಿ ಯಾಗಿ, ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ ಎಸ್.ಎಂ. ಕೃಷ್ಣ ಅವರು ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಯಾಗಿ ಆ ನಂತರ ಅಮೇರಿಕಾ ದೇಶದಲ್ಲಿ ವಿಧ್ಯಾಭ್ಯಾಸ ನಡೆಸಿ ಕಾನೂನು ಪದವಿ ಪಡೆದು ಅಪಾರ ವಿದ್ವತ್ ಪಡೆದು ತಮ್ಮ ಅಪಾರ ಜ್ಞಾನ ಭಂಡಾರದ ಮೂಲಕ ಭವಿಷ್ಯದ ಕನ್ನಡ ನಾಡಿನ ಅಭಿವೃದ್ಧಿಗೆ ಭದ್ರ ಭುನಾಧಿ ಕಲ್ಪಸಿ ಬೆಂಗಳೂರನ್ನು ಐಟಿ ಬಿಟಿ ರಾಜಧಾನಿ ಯಾಗಿಸಿ ನಾಡಿನ ಆರ್ಥಿಕ ಬೆಳವಣಿಗೆಗೆ ದಾರದೀಪವಾದವರು.
ಎಸ್.ಎಂ. ಕೃಷ್ಣ ಅವರು ಆರು ದಶಕಗಳ ಸುದೀರ್ಘ ಅವಧಿಗೆ ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿದ್ದವರು. ತಾವು ಅಲಂಕರಿಸಿದ ಹುದ್ದೆಗಳಿಗೆ ಅವರು ನ್ಯಾಯ ಒದಗಿಸಿಕೊಟ್ಟ ಒಬ್ಬ ಶ್ರೇಷ್ಠ ರಾಜಕಾರಣಿ. ಅವರ ಸಾಧನೆಯನ್ನು ಪರಿಗಣಿಸಿ ಭಾರತ ಸರ್ಕಾರವು ಈಚೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ಎಸ್ ಎಂ ಕೃಷ್ಣ ರವರು ಮೈಸೂರು ವಿಶ್ವವಿದ್ಯಾನಿಲಯದ ಕೀರ್ತಿ ಕಳಶರಾಗಿದ್ದರೆ. ಇಂದು ತಾವು ರಾಜ್ಯದ ಕನ್ನಡ ನಾಡಿನ ಸುವರ್ಣ ಸಂಭ್ರಮದ ಸಂಧರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಹ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಎಸ್ ಎಂ ಕೃಷ್ಣ ರವರು ನಾಡಿಗೆ ಸಲ್ಲಿಸಿದ ಕೀರ್ತಿಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವ ಮೂಲಕ ಅವರಿಗೆ ಕರ್ನಾಟಕಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಬೇಕಿದೆ ಎಂದು ಪತ್ರದಲ್ಲಿ ಬರೆದಿದ್ದಾರೆ.