ಬೆಂಗಳೂರು:- ಬೆಂಗಳೂರು ಪೂರ್ವ ತಾಲೂಕಿನ ತಹಸೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದಿಢೀರ್ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆ ಹಾಗೂ ಕಚೇರಿಯಲ್ಲಿನ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
Advertisement
ಸಚಿವರ ಭೇಟಿ ವೇಳೆ ತಹಸೀಲ್ದಾರ್ ರಾಜೀವ್ ಸೇರಿದಂತೆ ಅನೇಕ ಅಧಿಕಾರಿಗಳು ಮಧ್ಯಾಹ್ನ ಹನ್ನೆರಡು ಗಂಟೆಯಾದ್ರೂ, ಕಚೇರಿಗೆ ಬಾರದಿರುವ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ಜಾಗ ಒತ್ತುವರಿ ತೆರವು, ಹಾಜರಾತಿ ಪುಸ್ತಕ, ಶೌಚಾಲಯ, ಅಪರೇಟರ್ ಗಳ ಕೊರತೆಗಳ ಕುರಿತು ಸಾರ್ವಜನಿಕರು ದೂರು ನೀಡಿದರು. ಕೆಲಸಕ್ಕೆ ಹೆಚ್ಚಿನ ಸಿಬ್ಬಂದಿಗಳನ್ನು ನೀಡಿದರೂ, ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಕಚೇರಿಯಲ್ಲಿನ ಸಮಸ್ಯೆಗಳನ್ನು ಅರಿತ್ತಿದ್ದು, ಕೂಡಲೇ ಜಿಲ್ಲಾಧಿಕಾರಿಯಿಂದ ವರದಿ ತರಸಿಕೊಂಡು ಕ್ರಮಕೈಗೊಳ್ಳುವುದಾಗಿ ಸೂಚಿಸಿದರು.