ವಿಜಯಸಾಕ್ಷಿ ಸುದ್ದಿ, ಗದಗ: ಬೈಕ್ ಸ್ಕಿಡ್ ಆದ ಪರಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಆತನ ಮಡದಿ ಗಾಯಗೊಂಡ ಘಟನೆ, ತಾಲೂಕಿನ ಜಲಾಶಂಕರ ಬಳಿ ನಡೆದಿದೆ.
Advertisement
ಕಣವಿ ಹುಸೂರು ಗ್ರಾಮದ ಬಸವರಾಜ್ ಅರಗಂಜಿ(45) ಮೃತ ದುರ್ದೈವಿಯಾಗಿದ್ದು, ಆತನ ಪತ್ನಿ ಶಿವಲೀಲಾಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಲೂಕಿನ ಅಡವಿ ಸೋಮಾಪುರಕ್ಕೆ ಕೆಲಸದ ನಿಮಿತ್ತ ಹೋಗಿ ವಾಪಸ್ ಬರುವಾಗ ಜಲಾಶಂಕರ ಬಳಿಯ ನಾಗಾವಿ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ರಸ್ತೆಯ ಇಳಿಜಾರಿನಲ್ಲಿ ಬೈಕ್ ನಿಯಂತ್ರಣಕ್ಕೆ ಬಾರದೇ ರಸ್ತೆಯ ಎದುರಿನ ತಗ್ಗು ಪ್ರದೇಶಕ್ಕೆ ಬಿದ್ದ ಪರಿಣಾಮ, ಬಸವರಾಜ್ ನ ತಲೆಗೆ ಬಲವಾದ ಪೆಟ್ಟುಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಕುರಿತು ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

