ಸರ್ಕಾರದ ಸವಲತ್ತು ನೀಡುವಂತೆ ಮಹಾಮಂಡಳ ಆಗ್ರಹ

Vijayasakshi (Gadag News) :

ವಿಜಯಸಾಕ್ಷಿ ಸುದ್ದಿ, ಯಲ್ಲಾಪುರ

ರಾಜ್ಯದ ಕಾರ್ಮಿಕರಿಗೆ ನೀಡುವ ಸರ್ಕಾರದ ಸವಲತ್ತುಗಳನ್ನು ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೂ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳವು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳ ರಾಜ್ಯಾದ್ಯಂತ ಪಿಂಜಾರ,ನದಾಫ್, ಮನ್ಸೂರಿ, ದೂದೆಕುಲಾ ಜನಾಂಗವು ಪೂರ್ವಜರ ಕಾಲದಿಂದಲೂ ಹಾಸಿಗೆ ಹೊಲೆಯುವ ಕೆಲಸ ಮಾಡುತ್ತಿವೆ. ಸಮುದಾಯದ ಮೂಲ ವೃತ್ತಿವೂ ಇದೆ ಆಗಿದ್ದು,

ಕೂಲಿ ಕಾರ್ಮಿಕರಿಗೆ ಸಿಗುವ ಸೌಲಭ್ಯ ಹಾಗೂ ಯೋಜನೆಗಳಿಂದ ಈ ಸಮುದಾಯ ವಂಚಿತವಾಗುತ್ತಿದೆ.

ಕಂಪ್ಯೂಟರ್ ತಂತ್ರಜ್ಞಾನಕ್ಕೂ ಮುನ್ನ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಲ್ಲಿ ಪರಿಹಾರ, ಸವಲತ್ತು ನೀಡುತ್ತಿದ್ದರು. ಆದರೆ, ಇವತ್ತಿನ ಕಂಪ್ಯೂಟರ್ ತಂತ್ರಜ್ಞಾನದ ಆನ್‌ಲೈನ್ ಅರ್ಜಿಯಲ್ಲಿ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರಿಗೆ ಯಾವುದೇ ಸವಲತ್ತುಗಳ ಕುರಿತು ಮಾಹಿತಿ ಇಲ್ಲ. ಹಾಗಾಗಿ ಹಾಸಿಗೆ ಹೊಲೆಯುವ ಕೂಲಿ ಕಾರ್ಮಿಕರ ಕುಟುಂಬದ ಮಕ್ಕಳ ಶಿಕ್ಷಣ, ಪರಿಹಾರ ನೀಡಬೇಕು. ಅಲ್ಲದೇ, ಆನ್‌ಲೈನ್ ಅರ್ಜಿಯ ವೇಳೆ ಈ ಸಮುದಾಯ ಅರ್ಜಿ ತೆಗೆದುಕೊಂಡು ನ್ಯಾಯ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ರಾಜ್ಯಾಧ್ಯಕ್ಷ ಡಾ.ಅಬ್ದುಲ್ ರಜಾಕ್ ನದಾಫ್, ಗ್ರಾಮೀಣ ಟಿವಿ ಮುಖ್ಯಸ್ಥ ದಾದಾಫೀರ ಕುನ್ನೂರ, ಸಲ್ಮಾ ಬೇಗಂ ಪಿಂಜಾರ, ಹುಸೇನ್ ಪಿಂಜಾರ್, ಜಾವಿದ್ ಗುತ್ತಲ ಸೇರಿದಂತೆ ಸಮಾಜದ ಅನೇಕ ಮುಖಂಡರು ಇದ್ದರು.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿ.

Leave A Reply

Your email address will not be published.