ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿದ ಹಲ್ಮಿಡಿ ಶಾಸನದ ಪ್ರತಿಕೃತಿ ಶಿಲಾನ್ಯಾಸ ಸ್ತಂಭವನ್ನು ಶುಕ್ರವಾರ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಮೀನಾ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ತಾಲೂಕು ಗ್ಯಾರಂಟಿ ಸಮೀತಿ ಅಧ್ಯಕ್ಷ ಅಶೋಕ ಮಂದಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.