ಬೆಂಗಳೂರು:- ಗ್ಯಾರಂಟಿ ಯೋಜನೆ ಅವೈಜ್ಞಾನಿಕವಾಗಿದ್ದು, ಸಧ್ಯದ ಪರಿಸ್ಥಿತಿ ನೋಡಿದ್ರೆ ಹೆಣ ಹೂಳಲು ಕಾಂಗ್ರೆಸ್ ಬಳಿ ದುಡ್ಡಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.
Advertisement
ಗ್ಯಾರಂಟಿ ಯೋಜನೆಗಳು ಅವೈಜ್ಞಾನಿಕವಾಗಿವೆ. ಖರ್ಗೆಯವರೇ ಬಜೆಟ್ ನೋಡಿಕೊಂಡು ಗ್ಯಾರಂಟಿ ಘೋಷಿಸಬೇಕಿತ್ತು ಅಂದಿದ್ದಾರೆ. ಮಹಾರಾಷ್ಟ್ರದವರಿಗೂ ಹುಚ್ಚರ ಥರ ಐದಾರು ಗ್ಯಾರಂಟಿ ಘೋಷಿಸಬೇಡಿ ಅಂದಿದ್ದೇನೆ ಅಂತ ಖರ್ಗೆಯವರು ಹೇಳಿದ್ದಾರೆ. ಅಂದ್ರೆ ಕರ್ನಾಟಕದ ಕಾಂಗ್ರೆಸ್ ನವ್ರು ಹುಚ್ಚರು ಅಂತ ಆಯ್ತಲ್ಲ ಎಂದು ಲೇವಡಿ ಮಾಡಿದ್ದಾರೆ.
ಖರ್ಗೆಯವರು ಹೇಳಿದ್ದನ್ನು ಮೋದಿಯವರು ಎಕ್ಸ್ನಲ್ಲಿ ಹೇಳಿದ್ದಾರೆ ಅಷ್ಟೇ. ಹೆಣ ಮುಚ್ಚಲೂ ಕಾಂಗ್ರೆಸ್ ಬಳಿ ಹಣ ಇಲ್ಲ. ಇಂತಹ ಕಾಲ್ಪನಿಕ ಭರವಸೆಗಳಿಂದ ಹಿಮಾಚಲ ಪ್ರದೇಶ ದಿವಾಳಿ ಆಗಿದೆ ಅಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ ಎಂದು ಅಶೋಕ್ ಸಮರ್ಥನೆ ಮಾಡಿಕೊಂಡಿದ್ದಾರೆ.