Rain News: ಕರ್ನಾಟಕದಲ್ಲಿ ನವೆಂಬರ್ 9ರ ಬಳಿಕ ಭಾರೀ ಮಳೆ ಸಾಧ್ಯತೆ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ನವೆಂಬರ್ 9ರ ಬಳಿಕ ಭಾರೀ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಎಚ್​ಎಎಲ್​ನಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here