HomePolitics Newsಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ: ಡಿಕೆ ಶಿವಕುಮಾರ್

ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ: ಡಿಕೆ ಶಿವಕುಮಾರ್

For Dai;y Updates Join Our whatsapp Group

Spread the love

ಬೆಂಗಳೂರು: ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಯಾವ ರಣನೂ ಇಲ್ಲ, ರಂಗವೂ ಇಲ್ಲ. ಮತದಾರನ ಹೃದಯ ಗೆಲ್ಲಬೇಕು. ನಾವು ಮಾಡಿರುವ ಕೆಲಸಕ್ಕೆ, ಮಾಡುತ್ತಿರುವ ಕೆಲಸಕ್ಕೆ ಜನ ಗುರುತಿಸಿ ಎಂದು ಕೇಳಲು ಹೋಗುತ್ತಿದ್ದೇವೆ. ರಣರಂಗ ಆಡಿದವರೆಲ್ಲ ಮುಗಿದು ಹೋಗಿದ್ದಾರೆ. ಈಗ ಏನಿದ್ದರೂ ಜನರ ಲಾಭ ಮಾತ್ರ ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ಟಾಂಗ್ ಕೊಟ್ರು.

ಇನ್ನು ಚನ್ನಪಟ್ಟಣದಲ್ಲಿ ಬಿಜೆಪಿ ನಾಯಕರಿಂದ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ನಾಯಕರು ಸಾಥ್ ಕೊಟ್ಟಿರೋದು ಒಳ್ಳೆಯದು ಅಲ್ಲವಾ. ಬಿಜೆಪಿ ಪಾದಯಾತ್ರೆಗಂತೂ ಜೆಡಿಎಸ್ ಅವರು ಸಾಥ್ ಕೊಟ್ಟಿರಲಿಲ್ಲ. ಆದರೂ ಜೆಡಿಎಸ್‌ಗೆ ಬಿಜೆಪಿ ಅವರು ಸಾಥ್ ಕೊಡುತ್ತಿದ್ದಾರೆ, ಕೊಡಲಿ ಎಂದು ಬಿಜೆಪಿ ನಾಯಕರಿಗೆ ತಿವಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!