HomeGadag Newsಡಿ.ದೇವರಾಜ ಅರಸು ಭವನ, ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

ಡಿ.ದೇವರಾಜ ಅರಸು ಭವನ, ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ತಾಲೂಕಾಡಳಿತ, ತಾಲೂಕು ಪಂಚಾಯತ್, ತಾಲೂಕಾ ಹಿಂದುಳಿದ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶೋಷಿತರ ಸಮಗ್ರ ಅಭಿವೃದ್ಧಿಯ ಸಾಮಾಜಿಕ ಕ್ರಾಂತಿಯ ಹರಿಕಾರ, ನೊಂದವರ ನಂದಾದೀಪ, ಸಾಧನೆಗಳ ಸರದಾರ, ಧೀಮಂತ ನಾಯಕ ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ. ಡಿ.ದೇವರಾಜ ಅರಸು ಭವನ ಹಾಗೂ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು.

ಗದುಗಿನ ಸೂರ್ಯನಗರ ಡಾ.ಬಿ.ಆರ್.ಅಂಬೇಡ್ಕರ್ ಭವನದ ಹಿಂಭಾಗದಲ್ಲಿ ನಿರ್ಮಿಸಲಾದ ಕಟ್ಟಡವನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ,
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರವಿ ಲಕ್ಷö್ಮಣ ಗುಂಜೀಕರ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ, ಗದಗ-ಬೆಟಗೇರಿ ನಗರಸಭೆ ಆಯುಕ್ತ ಮಹೇಶ ಪೋತದಾರ, ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಜಿ.ವಿ. ಶಿರೋಳ, ಹಿಂದುಳಿದ ವರ್ಗಗಳ ತಾಲೂಕಾ ಕಲ್ಯಾಣಾಧಿಕಾರಿ ಡಾ.ಬಸವರಾಜ ಬಳ್ಳಾರಿ ಸೇರಿದಂತೆ ವಸತಿ ನಿಲಯದ ಮಕ್ಕಳು, ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!