ತುಮಕೂರು:- ಹಾಸ್ಟೆಲ್ ನಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ಜರುಗಿದೆ.
13 ವರ್ಷದ ಅಭಿಲಾಷ್ ಮೃತ ವಿದ್ಯಾರ್ಥಿ ಎನ್ನಲಾಗಿದೆ. ಮೃತ ವಿದ್ಯಾರ್ಥಿ ಅಭಿಲಾಷ್, ಶಕುನಿ ತಿಮ್ಮನಹಳ್ಳಿಯ ನಿವಾಸಿ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವುದಾಗಿ ಆರೋಪಿಸಲಾಗಿದೆ.



