ಬೆಂಗಳೂರು: ಐಪಿಎಸ್ ಅಧಿಕಾರಿ ಚಂದ್ರಶೇಖರ್ʼಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಎಸ್ ಅಧಿಕಾರಿ ಚಂದ್ರಶೇಖರ್ ದೂರಿನ ಅನ್ವಯ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ,ಸುರೇಶ್ ಬಾಬು ಮೇಲೆ ಎಫ್ ಐಆರ್ ದಾಖಲಾಗಿದೆ. ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಗಳು ದುರುದ್ದೇಶ ಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಚಂದ್ರಶೇಖರ್ ಅವರು ದೂರಿನಲ್ಲಿ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯದ ಆದೇಶದಂತೆ ಎಫ್ಐಆರ್ ದಾಖಲಾಗಿದೆ.
ಗಣಿ ಹಗರಣ ಪ್ರಕರಣದ ತನಿಖೆ ವಿಚಾರವಾಗಿ ಕಳೆದ ಕೆಲವು ದಿನಗಳ ಹಿಂದೆ ಎಡಿಜಿಪಿ ಚಂದ್ರೇಶಖರ್ ಮತ್ತು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಹೆಚ್ಡಿ ಕುಮಾರಸ್ವಾಮಿ ಅವರು ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಚಂದ್ರಶೇಖರ್ ಅವರು ದೂರು ದಾಖಲಿಸಿದ್ದರು.